Tuesday, August 16, 2022

Latest Posts

ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ಹೊಸದಿಗಂತ ವರದಿ, ವಿಜಯಪುರ:

ನಗರದ ಜಿಪಂ ಸಭಾ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡ 3ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಗೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಡಿಯ 2019-20 ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಗೆ, 130 ತ್ರಿಚಕ್ರವಾಹನಗಳನ್ನು ವಿತರಿಸಲಾಯಿತು.

ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss