Tuesday, March 28, 2023

Latest Posts

ಮನವಿಗೆ ಸ್ಪಂದಿಸಿದಕ್ಕೆ ಸಿಎಂ ಬೊಮ್ಮಾಯಿಗೆ ಧನ್ಯವಾದ ಕೋರಿದ ಸಚಿವ ಶಿವರಾಮ್ ಹೆಬ್ಬಾರ್

ಹೊಸದಿಗಂತ ವರದಿ ಯಲ್ಲಾಪುರ :

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಯಲ್ಲಾಪುರ ಪಟ್ಟಣದಲ್ಲಿ ವನವಾಸಿ ( ಬುಡಕಟ್ಟು ) ಸಿದ್ಧಿ,ದನಗರ ಗೌಳಿ ಹಾಗೂ ಕುಣಬಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯದ ಸ್ಥಾಪನೆಗೆ 1 ಎಕರೆ ಜಮೀನನ್ನು” ವನವಾಸಿ ಕಲ್ಯಾಣ ಸಂಸ್ಥೆಗೆ ” ಮಂಜೂರಾಗಿರುವುದನ್ನು ತಿಳಿಸುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ ಎಂದು .ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ನನ್ನ ಮನವಿಗೆ ಸ್ಪಂದಿಸಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ವಸತಿ ಶಾಲೆಯನ್ನು ನಿರ್ಮಾಣ ಮಾಡಲು ಜಮೀನನ್ನು ಮಂಜೂರು ಮಾಡಿರುವ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಕಂದಾಯ ಸಚಿವರಾದ ಆರ್.ಅಶೋಕ ಅವರಿಗೆ ಬುಡಕಟ್ಟು ಸಮುದಾಯದ ಪರವಾಗಿ ಹಾರ್ದಿಕ ಅಭಿನಂದನೆಗಳು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!