ಹೊಸದಿಗಂತ ವರದಿ,ಬೆಂಗಳೂರು:
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ವಿಕಾಸಸೌಧದ ಕಾರ್ಯಾಲಯದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2022 ನೇ ಸಾಲಿನ ಕ್ಯಾಲೆಂಡರ್ ಹಾಗೂ ಕಾರ್ಮಿಕ ಇಲಾಖೆಯ ಸಾಧನೆಯ ಮಾಹಿತಿಯುಳ್ಳ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ, ಕಾರ್ಮಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಕಲ್ಪನಾ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿರಾದ ಗುರುಪ್ರಸಾದ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.