Monday, October 20, 2025

ಆರ್‌ಎಸ್‌ಎಸ್‌ ಬಿಸಿ ಬಿಸಿ ಚರ್ಚೆ ನಡುವೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಈಗ ಆರ್ ಎಸ್ ಎಸ್ ಮತ್ತು ಕಾಂಗ್ರೆಸ್ ನಡುವೆ ಬಿಸಿಬಿಸಿ ಚರ್ಚೆಯ ಮಧ್ಯೆಯೇ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

RSS ಒಪ್ಪುವವರು ದೇಶಪ್ರೇಮಿಗಳಲ್ಲ, ದೇಶ ವಿರೋಧಿಗಳು ಎಂದು ಹೇಳಿಕೆ ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಇದು ಹಿಂದೂಪರ ಸಂಘಟನೆಗಳ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಕೊಪ್ಪಳದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ತಂಗಡಗಿ, ಯಾರೂ ಆರ್ ಎಸ್ ಎಸ್ ಒಪ್ಪಿಕೊಳ್ಳುತ್ತಾರೆ ಅವರು ದೇಶ ವಿರೋಧಿಗಳು. ಆರ್ ಎಸ್ ಎಸ್ ದೇಶಭಕ್ತಿ ಸಂಘಟನೆ ಅಂತಾ ಯಾವ ಮೂಲದಿಂದ ಒಪ್ಕೋತಿರಿ. ಇವರು ಗಾಂಧಿ, ಬಸವಣ್ಣ, ಬುದ್ದ ಯಾರನ್ನೂ ಒಪ್ಪಲ್ಲ. ಬಸವಣ್ಣರನ್ನ ಎಲ್ಲರೂ ಒಪ್ಕೋತಾರೆ. ಆದ್ರೆ ಆರ್ ಎಸ್ ಎಸ್ ನವರು ಒಪ್ಪಲ್ಲ ಎಂದು ವಾಗ್ದಾಳಿ ನಡೆಸಿದರು.

ಇವರು ಅಂಬೇಡ್ಕರ್ ಅವರನ್ನು ಒಪ್ಪಲ್ಲ, ರಾಷ್ಟ್ರ ದ್ವಜ ಒಪ್ಪಲ್ಲ, ರಾಷ್ಟ್ರಗೀತೆ ಒಪ್ಪಲ್ಲ. ಮೋದಿ, ಅಶೋಕ, ಯತ್ನಾಳ ಎಲ್ಲರೂ ಆರ್ ಎಸ್ ಎಸ್ ಅಂತಾರೆ‌. ಯಾವ ಮೂಲೆಯಿಂದ ನಾವು ರಾಷ್ಟ್ರಭಕ್ತ ಸಂಘಟನೆ ಎಂದು ಹೇಳುತ್ತೀರಿ. ಬೇರೆ ಯಾರಾದರೂ ಆಯುಧ ಹಿಡಿದುಕೊಂಡು ಓಡಾಡಿದ್ರೆ ಎಫ್ ಐ ಆರ್ ಮಾಡುತ್ತೀರಿ. ಇವರು ಬಡಿಗೆ ದೊಣ್ಣೆ ಹಿಡಿದು ಕೊಂಡು ಓಡಾಡಿದ್ರೆ ಯಾಕೆ ಎಫ್ ಐ ಆರ್ ಮಾಡಬಾರದು ಎಂದು ತಂಗಡಗಿ ಪ್ರಶ್ನಿಸಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಈಗ ಆರ್ ಎಸ್ ಎಸ್ ಮತ್ತು ಕಾಂಗ್ರೆಸ್ ನಡುವೆ ಬಿಸಿಬಿಸಿ ಚರ್ಚೆಯ ಮಧ್ಯೆಯೇ ಸಚಿವ ಶಿವರಾಜ್ ತಂಗಡಗಿ ವಿವಾದದ ಕಿಡಿಹೊತ್ತಿಸಿದ್ದಾರೆ.

error: Content is protected !!