Wednesday, August 17, 2022

Latest Posts

ಬಿಜೆಪಿ ಚುನಾವಣಾ ಸಹ ಪ್ರಭಾರಿಯಾಗಿ ಸಚಿವೆ ಶೋಭಾ ಕರಂದ್ಲಾಜೆ ನೇಮಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಉಡುಪಿ:

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಸಹ ಪ್ರಭಾರಿಯಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬುಧವಾರ ಯುಪಿ ವಿಧಾನಸಭಾ ಚುನಾವಣಾ ಪಕ್ಷ ಪ್ರಭಾರಿ ಮತ್ತು ಸಹ ಪ್ರಭಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಶಿಕ್ಷಣ ಮತ್ತು ಕೌಶಲ ವಿಕಾಸ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಭಾರಿಯಾಗಿದ್ದರೆ, ಏಳು ಮಂದಿ ಸಹಪ್ರಭಾರಿಗಳಿದ್ದಾರೆ. ಅವರ ಪೈಕಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಒಬ್ಬರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!