ಇಟಲಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ: ಕೃಷಿ ಉತ್ಪನ್ನಗಳ ರಫ್ತು ಬಗ್ಗೆ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಟಲಿ ಪ್ರವಾಸಕ್ಕೆ ತೆರಳಿದ್ದಾರೆ.
ಇದೇ ವೇಳೆ ಕೃಷಿ ಉತ್ಪನ್ನಗಳ ರಫ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಇಟಲಿ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿದ್ದಾರೆ.

ಇಟಲಿಯ ಕೃಷಿ ಸಚಿವ ಫ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಭೇಟಿಯಾದ ಶೋಭಾ ಕರಂದ್ಲಾಜೆ ದೇಶಗಳ ನಡುವಣ ಕೃಷಿ ರಫ್ತು, ತಂತ್ರಜ್ಞಾನಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ.

ಈ ಬಗ್ಗೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿದ್ದು, ಇಟಲಿಯ ಕೃಷಿ ಸಚಿವರನ್ನು ಭೇಟಿ ಮಾಡಿದ್ದೇನೆ. ಕೃಷಿಗೆ ಸಂಬಂಧಿಸಿದ ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಮಾತನಾಡಿದ್ದೇವೆ. ಭಾರತ-ಇಟಲಿ ನಡುವಿನ ಬಾಂಧವ್ಯದಿಂದ ನಮ್ಮ ನಾಡಿನ ಅನ್ನದಾತರಿಗೆ ಸಹಾಯವಾಗಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!