ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇರಳ ಮಾದರಿಯ ಕೊಲೆಗಳು ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ರೈತ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆಯವರು ಕೇಂದ್ರ ಗೃಹ ಸಚಿವರಿಗೆ ಅಮಿತ್ ಶಾ ಅವರನ್ನು ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿ ದ.ಕ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಮತ್ತು ಕೇರಳ ಗಡಿಯ ಭಾಗದ ಪರಿಸ್ಥಿತಿಯ ಕುರಿತು ಚರ್ಚಿಸಿದರು.

ನಂತರ ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಶೋಭಾ ಕರಂದ್ಲಾಜೆಯವರು ಕರ್ನಾಟಕದಲ್ಲಿ ನಡೆಯುತ್ತಿರುವ ಕೊಲೆಗಳಿಗೆ ಕೇರಳದಲ್ಲಿ ತರಬೇತಿ ನೀಡುತ್ತಿರುವ ಬಗ್ಗೆ ಶಂಕಿಸಿದರಲ್ಲದೇ, ಕೇರಳದಿಂದಲೇ ಹಣಕಾಸಿನ ನೆರವು ಸಿಗುತ್ತಿರುವ ಬಗ್ಗೆಯೂ ಅನುಮಾನ ವ್ಯಕ್ತ ಪಡಿಸಿದರು

ಕರ್ನಾಟಕ ರಾಜ್ಯದಲ್ಲಿ ಕೇರಳ ಮಾದರಿ ಹತ್ಯೆ ನಡೆಯುತ್ತಿದೆ. ನಿರಂತರವಾಗಿ ಹಿಂದು ಯುವಕರನ್ನು ಮತಾಂಧರು ಕಗ್ಗೊಲೆ ಮಾಡುತ್ತಿದ್ದಾರೆ. ಕತ್ತು ಕತ್ತರಿಸಿ ಎಲ್ಲರನ್ನೂ ಕೊಲೆ ಮಾಡಲಾಗಿದೆ, ಈ ಎಲ್ಲಾ ಕೊಲೆಗಳಲ್ಲಿ ಸಾಮ್ಯತೆ ಇದೆ.ಈ ಗಂಭೀರ ಸಮಸ್ಯೆಯ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ.

ಈ ಕೊಲೆಗಳಿಗೆ ತರಬೇತಿ ಎಲ್ಲಿ ಸಿಗುತ್ತಿದೆ..? ಇವುಗಳಿಗೆ ಹಣಕಾಸಿನ ನೆರವು ನೀಡುತ್ತಾ ಇರುವವರು ಯಾರು.? ಕರ್ನಾಟಕದಲ್ಲಿ ಅವರಿಗೆ ಸ್ಥಳೀಯವಾಗಿ ಬೆಂಬಲಿಸುತ್ತಿರುವವರು ಯಾರು? ಈ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಕೇಳಿದ್ದೇನೆ. ರಾಜ್ಯದಲ್ಲಿ ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬುದರ ಜೊತೆಗೆ ಹಲವಾರು ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೇನೆ, ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!