ಪ್ರವೀಣ್ ನೆಟ್ಟಾರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಶೋಭಾ ಕರಂದ್ಲಾಜೆ, 5 ಲಕ್ಷ ನೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಪ್ರವೀಣ್ ನೆಟ್ಟಾರು ಅವರ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಪ್ರವೀಣ್ ಪತ್ನಿ ಹಾಗೂ ಮನೆಯವರು ತಮಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ಈ ವೇಳೆ ಶೋಭಾ ಕರಂದ್ಲಾಜೆ, ಪ್ರವೀಣ್ ನೆಟ್ಟಾರು ಕುಟುಂಬದವರಿಗೆ 5 ಲಕ್ಷ ರೂಪಾಯಿ ನಗದು, ತಮ್ಮ ಒಂದು ತಿಂಗಳ ಸಂಬಳದ ಚೆಕ್ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ಪಿಎಫ್ಐ ಸಂಘಟನೆಯವರು ಸಿರಿಯಾ, ಪಾಕಿಸ್ತಾನಕ್ಕೆ ಹೋಗಿ ತರಬೇತಿ ಪಡೆದು ಬಂದಿರುವ ಬಗ್ಗೆ ಮಾಹಿತಿ ಇದೆ. ಪಕ್ಷದ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕೊಲೆಯನ್ನೂ ಪಿಎಫ್ಐ ಮಾಡಿರುವ ಅನುಮಾನ ಇದೆ. ಪ್ರವೀಣ್ ಅವರನ್ನು ಕೊಲೆ ಮಾಡಲು ಸಹಕಾರ ನೀಡಿ, ಅವರನ್ನು ತೋರಿಸಿಕೊಟ್ಟವರು ಇಲ್ಲಿನ ಜನರೇ ಇರಬಹುದು. ಈ ಕೊಲೆ ಕೇರಳ ಮಾದರಿಯಲ್ಲಿ ಮಾಡಲಾಗಿದೆ ಎಂದು ಹೇಳಿದರು.
ಈ ತರಹ ಕೊಲೆ ಮಾಡುವುದು ಪಿಎಫ್ಐ ಮಾತ್ರ. ರುದ್ರೇಶ್ ಕೊಲೆಯನ್ನೂ ಇದೇ ಪಿಎಫ್ಐ ಮಾಡಿತ್ತು. ಇದೀಗ ಅವರು ಜೈಲಲ್ಲಿ ಇದ್ದಾರೆ ಎಂದರು.
ಈಗಾಗಲೇ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಲಾಗಿದೆ. ಅವರು ತನಿಖೆ ಆರಂಭಿಸಿದ್ದಾರೆ. ನಾನು ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಷಯವನ್ನು ಮನವರಿಕೆ ಮಾಡಿ, ಮನವಿ ನೀಡಿದ್ದೇನೆ. ಎನ್ಐಎ ಈಗಾಗಲೇ ತನಿಖೆ ಆರಂಭಿಸಿದೆ. ಕೇರಳದ ತಲಶೇರಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!