Monday, August 8, 2022

Latest Posts

ಬಳ್ಳಾರಿ ಹರಿಶ್ಚಂದ್ರ ಘಾಟ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭೇಟಿ: ಪರಿಶೀಲನೆ

ಹೊಸದಿಗಂತ ವರದಿ, ಬಳ್ಳಾರಿ:

ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನಗರದ ತಾಳೂರು ರಸ್ತೆಯಲ್ಲಿರುವ ಹರಿಶ್ಚಂದ್ರ ಘಾಟ್ ಗೆ ಶನಿವಾರ ಬೆಳಗ್ಗೆ ಭೇಟಿ‌ ನೀಡಿದರು.
ಅಲ್ಲಿ ಕೈಗೊಳ್ಳಬೇಕಾದ ಸ್ವಚ್ಛತಾ ಕಾರ್ಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳ್ಳಾರಿ ನಗರದಲ್ಲಿರುವ 30 ಸ್ಮಶಾನಗಳಲ್ಲಿ ಈಗಾಗಲೇ 13 ಶವಸಂಸ್ಕಾರ ಸ್ಥಳಗಲ್ಲಿ ವಿದ್ಯುತ್ ದೀಪಗಳು, ರಸ್ತೆ, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನೀತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇದೇ ರೀತಿ ಉಳಿದ ಸ್ಮಶಾನಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಹಿಂದೆ ಸಮಾಜ ಕಲ್ಯಾಣ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಿದನ್ನು ಇದೇ ಸಂದರ್ಭದಲ್ಲಿ ಸಚಿವರು ಸ್ಮರಿಸಿಕೊಂಡರು.
ಸ್ವಚ್ಛತೆ ಪರಿಶೀಲನೆ ನಡೆಸುವುದರ ಜೊತೆಗೆ ಸ್ವತಃ ಜೆಸಿಬಿ ಚಲಾಯಿಸಿ ಸ್ವಚ್ಛತೆ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು, ಇತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss