Sunday, June 4, 2023

Latest Posts

ಚಿಕ್ಕಬಳ್ಳಾಪುರದಲ್ಲಿ ಮತ ಚಲಾಯಿಸಿದ ಸಚಿವ ಸುಧಾಕರ್‌ ದಂಪತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಚುನಾವಣಾ ಮತದಾನ ವೇಗ ಪಡೆದುಕೊಳ್ಳುತ್ತಿದ್ದು, ಎಲ್ಲಾ ಅಭ್ಯರ್ಥಿಗಳು ತಮ್ಮ ತಮ್ಮ ತವರು ಕ್ಷೇತ್ರದಲ್ಲಿ ಹಕ್ಕು ಚಲಾಯಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಾಗೂ ಅವರ ಪತ್ನಿ ಬೆಳಗ್ಗೆ ಪೆರೇಸಂದ್ರದಲ್ಲಿ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಪತ್ನಿ ಜೊತೆಗೆ ತಂದೆಯವರೂ ಮತ ಚಲಾಯಿಸಿದರು. ಚಿಕ್ಕಬಳ್ಳಾಪುರದಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು, ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಮತ ಚಲಾಯಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!