August 22, 2026
Saturday, August 22, 2026
spot_img

ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್‌ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು ಚಳ್ಳಕೆರೆಯ ಗೊಮ್ಮಟ ನಿವಾಸದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ. ಸುಧಾಕರ್‌ ನಿಧನಕ್ಕೆ ಸಂತಾಪ ಸೂಚಿಸಿದ ಸರ್ಕಾರ ಇಂದು ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಇಂದು ಅಭಿಮಾನಿಗಳು, ಬಳಗದವರಿಗೆ ಅಂತಿಮ ದರುಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ ನಾಲ್ಕು ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ. ಚಳ್ಳಕೆರೆಯ ಎಚ್‌ಪಿಪಿಸಿ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರುಶನಕ್ಕೆ ಅವಕಾಶ ನೀಡಲಾಗುತ್ತದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಶಾಸಕರು, ಮಂತ್ರಿಗಳು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !