ಕಾರವಾರದ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್

ಹೊಸದಿಗಂತ ವರದಿ ಕಾರವಾರ:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸಚಿವ ಡಾ. ಕೆ.ಸುಧಾಕರ ಅವರು ಕಾರವಾರ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರವಾರದಲ್ಲಿ ನಿರ್ಮಾಣ ಆಗುತ್ತಿರುವ 450 ಹಾಸಿಗೆಗಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ವೀಕ್ಷಿಸಿದ ಅವರು ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡು ಆಸ್ಪತ್ರೆಗೆ ಎಲ್ಲಾ ರೀತಿಯ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸುವ ಭರವಸೆ ನೀಡಿದರು.

ಗೋವಾದಿಂದ ರಸ್ತೆ ಮಾರ್ಗವಾಗಿ ಕಾರವಾರಕ್ಕೆ ಆಗಮಿಸಿದ ಆರೋಗ್ಯ ಸಚಿವರನ್ನು ಶಾಸಕಿ ರೂಪಾಲಿ ನಾಯ್ಕ ಗೌರವಪೂರ್ವಕವಾಗಿ ಬರಮಾಡಿಕೊಂಡು ಜಿಲ್ಲೆಯ ಅಗತ್ಯ ವೈದ್ಯಕೀಯ ಅಗತ್ಯತೆ ಕುರಿತಂತೆ ಗಮನ ಸೆಳೆದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!