ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದು ನಡೆದ ತುರ್ತು ಕ್ಯಾಬಿನೆಟ್ ಸಭೆಯಲ್ಲಿ ಚಾಮರಾಜನಗರ ದುರಂತ ನೆನೆದು ಜಿಲ್ಲೆಯ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಗಳಗಳನೆ ಅತ್ತಿದ್ದಾರೆ ಎನ್ನಲಾಗಿದೆ.
‘ನನ್ನ ರಾಜಕೀಯ ಜೀವನದಲ್ಲಿ ಇದೊಂದು ಅರಗಿಸಿಕೊಳ್ಳಲಾಗದ ಘಟನೆ, ಈ ಘಟನೆಗೆ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ನೇರಹೊಣೆ. ಚಾಮರಾಜನಗರ ಜಿಲ್ಲಾಧಿಕಾರಿ ಎಂ. ಆರ್. ರವಿ ಮತ್ತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ 24 ಸೋಂಕಿತರು ಸಾವನ್ನಪ್ಪಲು ಕಾರಣ. ಅವರಿಬ್ಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸುರೇಶ್ ಕುಮಾರ್ ಸಿಎಂ ಬಳಿ ಮನವಿ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.