ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತು ಮಾಹಿತಿ ನೀಡಿದ ಸಚಿವ ಸುರೇಶ್‌ಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ 3ನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದ ಸಮಿತಿ ನಾಳೆ ಮಧ್ಯಾಹ್ನ ಸಿಎಂ ಯಡಿಯೂರಪ್ಪಗೆ ಮಧ್ಯಂತರ ವರದಿ ಸಲ್ಲಿಸಲಿದ್ದು, ವರದಿಯ ಕೂಲಂಕುಶವಾಗಿ ಪರಿಶೀಲಿಸಿ ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರಗತಿ ಕಲಿಕೆಯ ಬಗ್ಗೆ ವರದಿಯಲ್ಲಿ‌ ಉಲ್ಲೇಖವಿದೆ ಎಂದು ಮಾಧ್ಯಮಗಳಲ್ಲಿಯಷ್ಟೇ ನೋಡಿದ್ದೇನೆ.‌ವರದಿ ತಮ್ಮ‌ ಕೈಸೇರಿದ ಬಳಿಕವಷ್ಟೇ ಪ್ರತಿಕ್ರಯಿಸಲು ಸಾಧ್ಯ ಎಂದರು.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ. ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹೆಚ್ಚಿನ ರೀತಿಯ ಗಮನಹರಿಸುವ ಸವಾಲು ನಮ್ಮ ಮುಂದಿದೆ.
ಸರ್ಕಾರಕ್ಕೆ ಶಾಲೆಗಳನ್ನು ತೆರೆಯಬೇಕೆಂಬ ಉತ್ಸುಕತೆ, ತರಗತಿ ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಡಾ.ದೇವಿಶೆಟ್ಟಿ ಅವರು ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಕ್ಲಪ್ತ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಗುಣಾತ್ಮಕ ಶಿಕ್ಷಣದ ಪರಿಕಲ್ಪನೆ ಸಾಕಾರವಾಗಬೇಕಾದಲ್ಲಿ ತರಬೇತಿ ಪ್ರಕ್ರಿಯೆ ವಸ್ತುನಿಷ್ಠವಾಗಬೇಕಿದೆ. ತರಬೇತಿ ಮೌಲ್ಯಮಾಪನ ವ್ಯವಸ್ಥೆ ಬಲಗೊಳ್ಳಬೇಕಿದೆ. ಶಿಕ್ಷಣ ಗುಣಮಟ್ಟ ಸುಧಾರಣೆಯ ಹಿನ್ನೆಲೆಯಲ್ಲಿ ಈ ತರಬೇತಿಯ ಫಲಿತಾಂಶ ಶಾಲಾ ತರಗತಿಯಲ್ಲಿ ಪ್ರತಿಫಲನಗೊಂಡು ನಮ್ಮ ಮಕ್ಕಳು ಅದರ ಪ್ರಯೋಜನವನ್ನು ಪಡೆಯುವಂತಾಗಬೇಕು. ಈ ತರಬೇತಿಯ ಅನುಪಾಲನಾ ವ್ಯವಸ್ಥೆ ಮೇಲಿಂದ ಮೇಲೆ ನಡೆಯುವಂತಹ ವ್ಯವಸ್ಥೆ ರೂಪುಗೊಳ್ಳಲು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.
ಪ್ರಸ್ತುತ ವ್ಯವಸ್ಥೆಯಲ್ಲಿ ತರಬೇತಿಗಳಷ್ಟೇ ನಡೆಯುತ್ತಿವೆ. ಸಂಶೋಧನೆಗಳು ಅಷ್ಟಾಗಿ ಕಂಡುಬರುತ್ತಿಲ್ಲ. ಶಿಕ್ಷಣದ ಗುಣಮಟ್ಟ ಸುಧಾರಣೆಗೆ ತರಬೇತಿಗಳಷ್ಟೇ ಸಾಕಾಗದು. ಬದಲಾದ ಕಾಲಮಾನಕ್ಕನುಗುಣವಾಗಿ ನಮ್ಮ ಸಂಶೋಧನಾ ಸಂಸ್ಥೆಗಳೂ ಬದಲಾಗಬೇಕಿದೆ. ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಈ ಸಂದರ್ಭದಲ್ಲಿ ಇಂತಹ ಸಂಶೋಧನಾ ಮತ್ತು ತರಬೇತಿ ಸಂಸ್ಥೆಯನ್ನು ಪುನರ್‍ರೂಪಿಸಬೇಕಾದ ಅಗತ್ಯವಿದ್ದು, ಈ ಕುರಿತು ಅಗತ್ಯ ಕ್ರಿಯಾ ಯೋಜನೆ ರೂಪಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss