ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ ಧ್ವಜಾರೋಹಣ, ಮಾಜಿ ಸೈನಿಕರಿಂದ ಗೌರವ ವಂದನೆ ಸ್ವೀಕಾರ

ಹೊಸದಿಗಂತ ವರದಿ ಬಾಗಲಕೋಟೆ:

ಜಿಲ್ಲಾಡಳಿತದಿಂದ‌ ನವನಗರದ ಜಿಲ್ಲಾ ಕ್ರೀಂಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಸ್ವಾತಂತ್ರ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ‌ ಸಚಿವ ಆರ್.ಬಿ.ತಿಮ್ಮಾಪೂರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ನಂತರ ಪೊಲೀಸ್ ಇಲಾಖೆ, ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ ಕೆಡೆಟ್‌, ಸ್ಕೌಟ್ ಮತ್ತು ಗೈಡ, ಗೃಹರಕ್ಷಕ ದಳ, ಮಾಜಿ ಸೈನಿಕರಿಂದ ಗೌರವ ವಂದನೆ ಸ್ವೀಕರಿಸಿದರು.

ನಂತರ ಮಾತನಾಡಿದ ಸಚಿವರು, ಅಹಿಂಸೆ ಎಂಬ ಅಸ್ತ್ರವನ್ನು ಬಳಸಿ ಭಾರತವನ್ನು ಬ್ರಿಟಿಷರಿಂದ ಬಂಧಮುಕ್ತಗೊಳಿಸಿದ ರಾಷ್ಟ್ರಪಿತ ಗಾಂಧೀಜಿಯವರ ಹೋರಾಟ ಜಗತ್ತಿಗೆ ಮಾದರಿ. ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರ ನುಡಿದಂತೆ‌ ನಡೆಯುವ ಸರ್ಕಾರ ಎಂಬ ಸಂದೇಶವನ್ನು ಜನತೆಗೆ ನೀಡಿದೆ. ದೇಶದಲ್ಲೇ ಪ್ರಥಮವಾಗಿ ವಿನೂತನ ಮಾದರಿಯಲ್ಲಿ ಸರ್ವಜನರ ಏಳಿಗೆಗೆ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ ಎಂದರು.

ಸಂಸದ‌ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಕೆ.ಎ.ಜಾನಕಿ, ಸಿಇಓ ಶಶಿಧರ ಕುರೇರ, ಎಸಿ ಶ್ವೇತಾ ಬೀಡ್ಕರ, ಎಡಿಸಿ ಪರಶುರಾಮ ಶಿನ್ನಾಳಕರ, ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇನ್ನಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!