ಹೊಸದಿಗಂತ ವರದಿ ಬಾಗಲಕೋಟೆ :
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಸಾವಯವ ಮೇಳ ಕಾರ್ಯಕ್ರಮ ನವನಗರದ ಕಲಾಭವನದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರಅವರು ಚಾಲನೆ ನೀಡಿ ಸಿರಿ ಧಾನ್ಯ ಮಳಿಗೆ ವೀಕ್ಷಿಸಿದರು. ನಂತರ ಮಾತನಾಡಿದ ಸಚಿವರು ಇಂದು ಮನುಷ್ಯನ ಆರೋಗ್ಯ ಸದೃಢವಾಗಲು ಸಾವಯವ ಪದಾರ್ಥಗಳು ಉಪಯೋಗಿಸುವುದು ಅಗತ್ಯವಿದೆ ಎಂದರು.
ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ,ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮತ್ತಿತರರು ಇದ್ದರು.