ವಿಜಯಪುರ ನೂತನ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿಯಿಂದ ರಾಷ್ಟ್ರ ಧ್ವಜಾರೋಹಣ

ಹೊಸದಿಗಂತ ವರದಿ, ವಿಜಯಪುರ:

ನಗರ ಹೊರ ವಲಯ ತೊರವಿ ಬಳಿಯ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ 73 ನೇ ಗಣರಾಜ್ಯೋತ್ಸವವನ್ನು ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಯಿತು.
ನೂತನ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ,‌ ಬಬಲೇಶ್ವರ ಶಾಸಕ ಎಂ.ಬಿ‌. ಪಾಟೀಲ, ಜಿಲ್ಲಾಧಿಕಾರಿ ‌ಪಿ. ಸುನೀಲಕುಮಾರ, ಎಸ್ಪಿ ಎಚ್.ಡಿ. ಆನಂದಕುಮಾರ, ಜಿಪಂ ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!