Wednesday, October 5, 2022

Latest Posts

ಸಚಿವ ಉಮೇಶ್ ಕತ್ತಿ ನಿಧನ: ಗಣ್ಯರ ಸಂತಾಪ

ಹೊಸದಿಗಂತ ವರದಿ,ಬಳ್ಳಾರಿ:

ಸಂಪುಟ ಸಹೋದ್ಯೋಗಿ, ಅರಣ್ಯ, ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ನಿಧನ ನಿಜಕ್ಕೂ ತೀವ್ರ ಆಘಾತವಾಗಿದ್ದು, ಅವರ ಆತ್ಮಕ್ಕೆ ದೇವರು ಶಾಂತಿ, ನೆಮ್ಮದಿ ನೀಡಲಿ, ಅವರ ಕುಟುಂಬದ ಸದಸ್ಯರಿಗೆ ದುಖಃ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹಾಗೂ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಪ್ರಾರ್ಥಿಸಿದ್ದಾರೆ.
ಉತ್ತರ ಕರ್ನಾಟಕ ಗಟ್ಟಿ ಧ್ವನಿಯಾಗಿದ್ದ ಸಚಿವ ಉಮೇಶ್ ಕತ್ತಿ ಅವರು ನಿಧನದಿಂದ ರಾಜ್ಯ ರಾಜಕಾರಣಕ್ಕೆ ಅಪಾರ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ, ನೆಮ್ಮದಿ ನೀಡಲಿ, ಅವರ ಕುಟುಂಬದ ಸದಸ್ಯರಿಗೆ, ಕಾರ್ಯಕರ್ತರಿಗೆ, ಅಭಿಮಾನಿ ವರ್ಗಕ್ಕೆ ದುಖಃ ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಂಸದ ವೈ.ದೇವೇಂದ್ರಪ್ಪ, ಎಮ್ಮೆಲ್ಸಿ ವೈ.ಎಂ.ಸತೀಶ್, ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಸಿರಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಮುರಹರಗೌಡ, ಚೆನ್ನಬಸವನಗೌಡ ಪಾಟೀಲ್, ಕೂಡ್ಲಗಿ ಶಾಸಕ ಎನ್.ವೈ.ಗೋಪಾಲಕೃಷ್ಣ, ಹರಪನಹಳ್ಳಿ ಶಾಸಕ ಜಿ.ಕರುಣಾಕರ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಪ್ರಾರ್ಥಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!