Monday, September 26, 2022

Latest Posts

ಸಚಿವ ಉಮೇಶ್‌ ಕತ್ತಿ ನಿಧನ: ಬೆಳಗಾವಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಹೊಸದಿಗಂತ ವರದಿ ಬೆಳಗಾವಿ:

ಅರಣ್ಯ ಹಾಗೂ ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಶೋಕ ಮುಗಿಲು ಮುಟ್ಟಿದೆ. ಉಮೇಶ್ ಕತ್ತಿ ಸಾವಿನ ಸುದ್ದಿ ತಿಳಿಯುತ್ತಿದಂತೆ ಮಂಗಳವಾರ ರಾತ್ರಿಯಿಂದ ಅವರ ಹುಟ್ಟೂರು ಬೆಲ್ಲದ ಬಾಗೇವಾಡಿಗೆ ಅವರ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಬಾಗೇವಾಡಿ ಗ್ರಾಮದಲ್ಲಿರುವ ತೋಟದಲ್ಲಿ ಅವರ ತಂದೆ, ತಾಯಿಯ ಸಮಾಧಿ ಬಳಿ ಉಮೇಶ ಕತ್ತಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ದತೆ ನಡೆಯುತ್ತಿದೆ.

ವಿಶ್ವರಾಜ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಚಿವ ಉಮೇಶ ಕತ್ತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬುಧವಾರ(ಸೆ.7) ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳು ಸೇರಿದಂತೆ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!