ಕಾಂಗ್ರೆಸ್‌ನತ್ತ ಸೋಮಣ್ಣ ಚಿತ್ತ ? : ರಾಜಕೀಯ ನಿಲುವು ಸ್ಪಷ್ಟಪಡಿಸಿದ ಸೋಮಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಜೋರಾಗಿ ಸದ್ದು ಮಾಡುತ್ತಿದ್ದು, ಬಿಜೆಪಿ ಮೇಲೆ ಅಸಮಾಧಾನಗೊಂಡಿರುವ ವಿ.ಸೋಮಣ್ಣ ಕಾಂಗ್ರೆಸ್‌ ಪಕ್ಷ ಸೇರುತ್ತಾರೆ ಎನ್ನುವ ವದಂತಿ ಕಳೆದೆರಡು ವಾರಗಳಿಂದ ಭಾರೀ ಸದ್ದು ಮಾಡಿತ್ತು.

ಈ ವದಂತಿ ಬೆನ್ನಲೇ ಡಿ.ಕೆ ಶಿವಕುಮಾರ್‌ ಅವರೊಂದಿಗಿನ ವಿ.ಸೋಮಣ್ಣ ಅವರ ಫೋಟೋ ಕೂಡ ವೈರಲ್‌ ಆಗಿತ್ತು. ಇದೀಗ ಈ ವದಂತಿಗೆ ಸಂಬಂಧಿಸಿದಂತೆ ಸ್ವತಃ ಸೋಮಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್ 14) ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ​​ ನಾನು ಕಾಂಗ್ರೆಸ್​​ಗೆ ಹೋಗುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನನ್ನನ್ನು ಸಂಪರ್ಕಿಸಿಲ್ಲ. ನಾನು ಕಾಂಗ್ರೆಸ್​ಗೆ ಹೋಗುತ್ತೇನೆಂದು ವದಂತಿ ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗೊಂದಲಳಿಗೆ ತೆರೆ ಎಳೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!