ವಯನಾಡಿಗೆ ತೆರಳುತ್ತಿದ್ದ ಸಚಿವೆ ವೀಣಾ ಜಾರ್ಜ್‌ ಕಾರು ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭೀಕರ ಪ್ರವಾಹ ಎದುರಿಸುತ್ತಿರುವ ವಾಯನಾಡಿಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಭೇಟಿ ನೀಡುವ ವೇಳೆ ಅಪಘಾತ ಸಂಭವಿಸಿದೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ.

ಭೂಕುಸಿತ ಪೀಡಿತ ವಯನಾಡಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಆಕೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!