ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಸಚಿವ ವೆಂಕಟೇಶ್ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ಯಳಂದೂರು ಠಾಣೆಯ ಪಿಎಸ್ಐ ಆಕಾಶ್ ಮತ್ತು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬಿಳಿಗಿರಿರಂಗನ ಬೆಟ್ಟಕ್ಕೆ ಉಸ್ತುವಾರಿ ಸಚಿವ ವೆಂಕಟೇಶ್ ಅವರು ಬೇಟಿ ನೀಡಿದ್ದರು. ಈ ವೇಳೆ ಸಚಿವರ ಜೊತೆ ಎಸ್ಕಾರ್ಟ್ ಆಗಿ ಎಯಳಂದೂರು ಠಾಣೆಯ ಪಿಎಸ್ಐ ಜೊತೆ ಹೋಗಿದ್ದರು. ಮಳೆ ಹಿನ್ನೆಲೆಯಲ್ಲಿ ತಿರುವಿನಲ್ಲಿ ಪೈಲಟ್ ವಾಹನ ಪಲ್ಟಿಯಾಗಿದೆ.
ಗಂಭೀರವಾಗಿ ಗಾಯಗೊಂಡ ಎಸ್ಕಾರ್ಟ್ ವಾಹನದ ಚಾಲಕ ಮತ್ತು ಪಿಎಸ್ಐ ಮತ್ತು ಚಾಲಕನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.