ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಸೋಮಶೇಖರ್, ಶಿವರಾಂ ಹೆಬ್ಬಾರ್ ಕಳೆದ ರಾತ್ರಿ ಕಾಂಗ್ರೆಸ್ ಶಾಸಕಾಂಗ ಸಭೆಗೆ ಬಂದಿರುವುದಲ್ಲ, ಅವರು ಬಂದಿರುವುದು ಭೋಜನಕೂಟಕ್ಕೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುವರ್ಣಸೌಧದಲ್ಲಿ ಗುರುವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಿಶ್ವನಾಥ್ ಸೇರಿದಂತೆ ಇತರೆ ಪಕ್ಷದ ಹತ್ತು ಶಾಸಕರು ಉಪಹಾರ ಕೂಟಕ್ಕೆ ಬಂದಿದ್ದರು. ಅವರು ನಮ್ಮ ಪಕ್ಷದ ಶಾಸಕರಲ್ಲ. ಹೀಗಾಗಿ ಅವರು ನಮ್ಮ ಶಾಸಕಾಂಗ ಸಭೆಗೆ ಬಂದಿರುವುದು ಅಲ್ಲ ಎಂದು ಡಿಕೆಶಿ ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ