ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಲಕ್ಷದ್ವೀಪ ಪ್ರವಾಸದ ವಿಚಾರವಾಗಿ ಮಾಲ್ಡೀವ್ಸ್ ಸಚಿವ ಅವಹೇಳನಕಾರಿ ಹೇಳಿಕೆ ನೀಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವೆ ಮರಿಯಮ್ ಶಿಯುನಾ ಅವರು ಮಾಡಿದ ಅವಹೇಳನಕಾರಿ ಹೇಳಿಕೆಗಳಿಂದ ಮಾಲ್ಡೀವ್ಸ್ ಸರ್ಕಾರ ಅಂತರ ಕಾಯ್ದುಕೊಂಡಿದೆ.
ಮಾಲ್ಡೀವ್ಸ್ ಸರ್ಕಾರ ಹೇಳಿಕೆಯಲ್ಲಿ ಸಚಿವರ ಅಭಿಪ್ರಾಯ ವೈಯಕ್ತಿಕ, ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳಲ್ಲ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾದವು.
ಈ ಹೇಳಿಕೆಯಿಂದಾಗಿ ಇದೀಗ ಎಕ್ಸ್ನಲ್ಲಿ Boycott Maldives ಹ್ಯಾಶ್ಟ್ಯಾಗ್ನಲ್ಲಿ ಅಭಿಯಾನ ಶುರುವಾಗಿದೆ. ಪ್ರವಾಸೋದ್ಯಮವನ್ನು ಅವಲಂಬಿಸಿರುವ ಮಾಲ್ಡೀವ್ಸ್ಗೆ ಭಾರತದ ಶಕ್ತಿಯ ಬಗ್ಗೆ ತಿಳಿದಿಲ್ಲ ಎಂದು ಭಾರತೀಯರು ಹೇಳುತ್ತಿದ್ದಾರೆ. ಮಾಲ್ಡೀವ್ಸ್ ಪ್ರವಾಸವನ್ನು ರದ್ದುಗೊಳಿಸಿದ ನಂತರ ಲಕ್ಷದ್ವೀಪಕ್ಕೆ ಆದ್ಯತೆ ನೀಡುವವರು ಅನೇಕರಿದ್ದಾರೆ.