Saturday, December 9, 2023

Latest Posts

ಮಳೆ ಹಾನಿ ಪ್ರದೇಶಗಳಿಗೆ ಸಚಿವದ್ವಯರ ಭೇಟಿ, ಪರಿಶೀಲನೆ

ಹೊಸದಿಗಂತ ವರದಿ ಮಡಿಕೇರಿ:

ಭಾರೀ ಮಳೆಯಿಂದಾಗಿ ಕೊಡಗು ಜಿಲ್ಲೆ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಮಂಗಳವಾರ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಇದಕ್ಕೂ ಮೊದಲು ಕುಶಾಲನಗರದ ಸಾಯಿ‌ ಮತ್ತು ಕುವೆಂಪು ಬಡಾವಣೆಗೆ ಭೇಟಿ ನೀಡಿ ಪ್ರವಾಹದಿಂದ ಜಲಾವೃತಗೊಂಡಿದ್ದ ಮನೆಗಳನ್ನು ಪರಶೀಲನೆ ನಡೆಸಿದರು.

ಬಳಿಕ ಭಾಗಮಂಡಲಕ್ಕೆ ತೆರಳಿದ ಸಚಿವರಿಗೆ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಮತ್ತಿತರರು ಸಾಥ್‌ ನೀಡಿದರು.

ಭಾಗಮಂಡಲದಲ್ಲಿ ಉಸ್ತುವಾರಿ ಸಚಿವರೊಂದಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೂ ಜೊತೆಯಾಗಿ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!