ಫಾಲೋವರ್ಸ್‌ ಜಾಸ್ತಿ ಮಾಡ್ಕೊಳೋಕೆ ಕೆಟ್ಟ ದಾರಿ ಹುಡುಕಿದ ಹುಡುಗರು, ಬಾಲಕನ ಕಿಡ್ನ್ಯಾಪ್‌!!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟ್ಯೂಷನ್‌ನಿಂದ ಮನೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು 12 ಅಪ್ರಾಪ್ತ ಬಾಲಕರ ಗುಂಪು ಕಿಡ್ನ್ಯಾಪ್‌ ಮಾಡಿದೆ. ಸಾಲದ್ದಕ್ಕೆ ಬಾಲಕಿಗೆ ಹಿಗ್ಗಮುಗ್ಗ ಥಳಿಸಿದ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಬಾಲಕಿಯನ್ನು ಅಪಹರಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು, ಕೋಲು ಮತ್ತು ಬೆಲ್ಟ್ ನಿಂದ ಕ್ರೂರವಾಗಿ ಥಳಿಸಿ, ಹಲ್ಲೆ ನಡೆಸಿ ಸಂಪೂರ್ಣ ಘಟನೆಯನ್ನು ವಿಡಿಯೊ ರೆಕಾರ್ಡ್ ಮಾಡಿದ್ದಾರೆ.

ಪೊಲೀಸ್ ಮೂಲಗಳು ಹೇಳುವ ಪ್ರಕಾರ, ಈ ಬಾಲಕರು ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ಗಳಲ್ಲಿ ಫಾಲೋವರ್ಸ್ ಗಳನ್ನು ಹೆಚ್ಚಿಸಲು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಏನೂ ತಿಳಿಯದ ಈ ವಯಸ್ಸಿನ ಮಕ್ಕಳ ಮೇಲೆ ಸೋಶಿಯಲ್‌ ಮೀಡಿಯಾ ಹೇಗೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಇದು ನಿದರ್ಶನವಾಗಿದೆ.

ದೂರಿನ ಆಧಾರದ ಮೇಲೆ, ಪೊಲೀಸರು 12 ಬಾಲಕರ ವಿರುದ್ಧ ಪ್ರಕರಣ ದಾಖಲಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾವು ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ, ಬಾಲಕ ಮತ್ತು ಆತನ ಪೋಷಕರಿಗೆ ನ್ಯಾಯ ಒದಗಿಸಲಾಗುವುದು ಎಂದು ತನಿಖಾಧಿಕಾರಿಗಳು ಹೇಳುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!