ಅಪ್ರಾಪ್ತ ಬಾಲಕಿ ಮೇಲೆ 8ಮಂದಿ ಸಾಮೂಹಿಕ ಅತ್ಯಾಚಾರ: ವಿಡಿಯೋ ತೆಗೆದು ಬ್ಲಾಕ್ ಮೇಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಲವು ಕಿಡಿಗೇಡಿಗಳು 16 ವರ್ಷದ ಬಾಲಕಿಯ ಖಾಸಗಿ ಫೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ. ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಎಳೆದೊಯ್ದು 8 ಮಂದಿ ಅತ್ಯಾಚಾರ ಎಸಗಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿರುವ ದಾರುಣ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದಿದೆ.

ಆರೋಪಿಗಳು ಯುವತಿಯಿಂದ 50,000 ರೂ.ಗೆ ಬೇಡಿಕೆ ಇಟ್ಟಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಮೊದಲಿಗೆ ಆರೋಪಿಗಳು ಬಾಲಕಿಯ ಖಾಸಗಿ ಫೋಟೋಗಳನ್ನು ತೆಗೆದು ಅವುಗಳನ್ನು ಸೋರಿಕೆ ಮಾಡದಂತೆ 50 ಸಾವಿರ ರೂ. ಬೇಡಿಕೆ ಇಟ್ಟಿದ್ದರಂತೆ. ಹಣ ಪಡೆದುಕೊಳ್ಳುವ ನೆಪದಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆಸಿ ಸಾಮೂಹಿಕ ಅತ್ಯಚಾರ ಮಾಡಿದ್ದಾರೆ. ಈ ಹೇಯ ಕೃತ್ಯವನ್ನು ಸಹ ವಿಡಿಯೋ ಮಾಡಿಕೊಂಡ ಕಿರಾತಕರು ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈ ನಡುವೆ ಜನವರಿ 3 ಮತ್ತು ಏಪ್ರಿಲ್ 6 ರಂದು ಮತ್ತೊಮ್ಮೆ ಲೈಂಗಿಕ ದೌರ್ಜನ್ಯ ನಡೆಸಿ, ಈ ಬಾರಿ 2 ಲಕ್ಷ 50 ಹಣ ಕೊಡುವಂತೆ ಕೇಳಿದ್ದಾರೆ. ತನ್ನ ಬಳಿ ಅಷ್ಟು ಹಣವಿಲ್ಲ ಎಂದಿದ್ದಕ್ಕೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಬಾಲಕಿಯ ಪೋಷಕರು ಈ ವಿಡಿಯೋ ನೋಡಿದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಅವರ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದ ತಕ್ಷಣ ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!