ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅನ್ಯಕೋಮಿನ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕಡಬದ ಶಾಕೀರ್ ಎಂಬಾತ ಕಿರುಕುಳ ನೀಡಿದ ಆರೋಪಿ. ಯುವಕರ ಕೃತ್ಯದಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಯುವಕನನ್ನು ಒಪ್ಪಿಸುವಂತೆ ಪುತ್ತೂರು ತಾಲೂಕಿನ ನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಪುತ್ತೂರಿನಲ್ಲಿ ನಡೆಯುತ್ತಿದ್ದ ಕಂಬಳ ವೀಕ್ಷಿಸಲು ತೆರಳುತ್ತಿದ ವೇಳೆ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಈ ಸಂಬಂಧ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಯಿಂದ ಕೋಪಗೊಂಡ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ ಶಂಕಿತನನ್ನು ಹಸ್ತಾಂತರಿಸುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ಹಿಂದೂ ಮುಖಂಡ ಅರುಣ್ ಪುತ್ತಿಲ ಯುವಕರಿಗೆ ಸಾಂತ್ವನ ಹೇಳಿದರು.
ಈ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಠಾಣೆ ಮುಂದೆ ಸೇರಿದ ಗುಂಪನ್ನು ಚದುರಿಸಿ ಕಳುಹಿಸಿದ್ದಾರೆ.