ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾ*ಚಾರ : ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸ್ವಂತ ಚಿಕ್ಕಪ್ಪನೇ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆಯ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದು ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಚಿಕ್ಕಪ್ಪ ನನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Copy and paste this URL into your WordPress site to embed
Copy and paste this code into your site to embed