ಅಪ್ರಾಪ್ತ ಬಾಲಕಿ ಮೇಲೆ ಧಾರ್ಮಿಕ ಶಿಕ್ಷಕನಿಂದ ಅತ್ಯಾಚಾರ

 ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಧಾರ್ಮಿಕ ಶಿಕ್ಷಕರೊಬ್ಬ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಸೀದಿಯಲ್ಲಿ ಬಾಲಕಿಯ ಧಾರ್ಮಿಕ ಶಿಕ್ಷಕನಾಗಿದ್ದ ಓವೈಸ್ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಬಾಲಕಿಯನ್ನು ಮಸೀದಿ ಬಳಿಯ ತನ್ನ ಕೋಣೆಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ. ದೂರಿನ ಮೇರೆಗೆ ಐಪಿಸಿ 376 ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!