ಪಾರ್ಟಿಗೆಂದು ಗೋವಾಗೆ ಕರೆಸಿ ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಅತ್ಯಾಚಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಾರ್ಟಿಗೆಂದು ಮೂವರು ಬಾಲಕಿಯರನ್ನು ಆಹ್ವಾನಿಸಿ ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ.

ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಹುಡುಗಿಯರ ಪೋಷಕರು ಪೊಲೀಸರ ಬಳಿ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಹುಡುಗಿಯರು ಆರೋಪಿಗಳ ಸ್ನೇಹಿತರಾಗಿದ್ದರು ಮತ್ತು ಅವರನ್ನು ಪಾರ್ಟಿಗೆ ಆಹ್ವಾನಿಸಿದ್ದರಿಂದ ಇವರು ಹೋಗಿದ್ದರು.

ಪೊಲೀಸರು ಅವರನ್ನು ಹುಡುಕಲು ಹಲವಾರು ತಂಡಗಳನ್ನು ರಚಿಸಿದ ನಂತರ ಅದೇ ದಿನ ಕ್ಯಾಲಂಗುಟ್ ಬೀಚ್‌ನಲ್ಲಿರುವ ಹೋಟೆಲ್‌ನಿಂದ ಅವರನ್ನು ರಕ್ಷಿಸಲಾಯಿತು.ಪೊಲೀಸರು ಅಲ್ತಾಫ್ (19) ಮತ್ತು ಓಂ (21) ಎಂದು ಗುರುತಿಸಲಾದ ಆರೋಪಿಗಳನ್ನು ಸಹ ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!