ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸಂಗಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಅಪ್ರಾಪ್ತ ಶಾಲಾ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪರಸ್ಪರ ಬಾಂಬ್ ತೂರಾಟ ನಡೆದಿದೆ.
ವರದಿಗಳ ಪ್ರಕಾರ, ಸಂಗಮ್ ಪ್ರದೇಶದಲ್ಲಿ ಕೆಲವು ವಿದ್ಯಾರ್ಥಿಗಳು ಹುಟ್ಟುಹಬ್ಬದ ಸಂತೋಷಕೂಟ ಆಚರಿಸುತ್ತಿದ್ದಾಗ ಅಲ್ಲಿಗೆ ಆಗಮಿಸಿದ ಇನ್ನೊಂದು ವಿದ್ಯಾರ್ಥಿಗಳ ಗುಂಪು ಬಾಂಬ್ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಗುಂಪು ಸಹ ಬಾಂಬ್ ದಾಳಿ ನಡೆಸಿದೆ. ಈ ಬಾಂಬ್ ಸ್ಫೋಟದಲ್ಲಿ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡೂ ಗುಂಪಿನ ವಿದ್ಯಾರ್ಥಿಗಳು ಒಂದೇ ಶಾಲೆಯಲ್ಲಿ ಓದುತ್ತಾರೆ ಎಂಬ ವಿಚಾರ ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ನಗರ ಎಸ್ಪಿ ದಿನೇಶ್ ಕುಮಾರ್ ಸಿಂಗ್, ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಗೊಂಡ ಯುವಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಈ ಎರಡು ಗುಂಪುಗಳು ಈ ಹಿಂದೆಯೂ ಪರಸ್ಪರ ಹೊಡೆದಾಡಿಕೊಂಡಿವೆ ಎಂದು ನಗರ ಎಸ್‌ಪಿ ತಿಳಿಸಿದ್ದಾರೆ. ಸಿವಿಲ್ ಲೈನ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಆರೋಪಿಗಳನ್ನು ಬಂಧಿಸಲು ಪೊಲೀಸರು ವಿವಿಧೆಡೆ ದಾಳಿ ನಡೆಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ