Thursday, July 7, 2022

Latest Posts

ತವರಿಗೆ ವಾಪಸ್ಸಾದ ಬೆಳ್ಳಿ ಗೆದ್ದ ಮೀರಾಬಾಯಿ ಚಾನು: ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಸೋಮವಾರ ದೆಹಲಿಗೆ ಆಗಮಿಸಿದರು. ಪದಕ ಗೆದ್ದು ತವರಿಗೆ ವಾಪಸ್ಸಾದ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಿದ್ದಾರೆ.
26 ವರ್ಷದ ಆಟಗಾರ್ತಿಯನ್ನ ‘ಭಾರತ್ ಮಾತಾ ಕಿ ಜೈ’ ಘೋಷಣೆಗಳೊಂದಿಗೆ ಸ್ವಾಗತಿಸಲಾಯಿತು ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳು ಸನ್ಮಾನಿಸಿದರು.
ಪ್ರೀತಿ ಪೂರ್ವಕ ಸ್ವಾಗತಕ್ಕೆ ಮನಸೋತ ಮೀರಾ, ‘ತುಂಬಾ ಪ್ರೀತಿ ಮತ್ತು ಬೆಂಬಲದ ನಡುವೆ ಇಲ್ಲಿಗೆ ಮರಳಲು ಸಂತೋಷವಾಗಿದೆ, ತುಂಬಾ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss