ಇಸ್ರೇಲ್ ನಲ್ಲಿ ಕನ್ನಡಿಗರು ಲಾಕ್: ರಾಜ್ಯ ಸರ್ಕಾರದಿಂದ ಹೆಲ್ಪ್‌ಲೈನ್ ಓಪನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಸ್ರೇಲ್ ಮೇಲೆ ಪ್ಯಾಲೆಸ್ತೀನನ ಹಮಾಸ್ ಉಗ್ರರು 5000ಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದೆ. ಏಕಾಏಕಿ ನಡೆದ ದಾಳಿಗೆ ನೂರಾರು ಇಸ್ರೇಲ್ ಪ್ರಜೆಗಳ ಸಾವನ್ನಪ್ಪಿದ್ದಾರೆ.

ಈ ನಡುವೆ ಇಸ್ರೇಲ್‌ನಲ್ಲಿ ನಲೆಸಿರುವ ಸಾವಿರಾರು ಭಾರತೀಯರು ನೆಲೆಸಿದ್ದು, ಅದರಲ್ಲೂ ಕನ್ನಡಿಗರು ಸಹ ಇದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತುತ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಇಸ್ರೇಲ್‌ನಲ್ಲಿ ನಲೆಸಿರುವ ಎಲ್ಲ ಭಾರತೀಯರು ಸುರಕ್ಷಾ ಮತ್ತು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಜನನಿಬಿಡ ಪ್ರದೇಶಗಳ ಮೇಲೆ ರಾಕೆಟ್ ದಾಳಿ ಮುಂದುವರಿದಿದ್ದು, ಇನ್ನೊಂದೆಡೆ ಇಸ್ರೇಲ್ ಪ್ರವೇಶಿಸಿರುವ ಹಮಾಸ್ ಉಗ್ರರು ಇಸ್ರೇಲಿ ಪ್ರಜೆಗಳನ್ನು ಅಪಹರಿಸುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಮನೆಯಿಂದ ಆಚೆ ಬರದಂತೆ ಸೂಚಿಸಲಾಗಿದೆ. ದೇಶದ ಜನರು ಅದರಲ್ಲೂ ಕನ್ನಡಿಗರು ಸಹ ಸ್ಥಳೀಯ ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಿಕೊಂಡಿದ್ದಾರೆ.

ಅನಗತ್ಯ ಪ್ರಯಾಣಗಳನ್ನು ತಪ್ಪಿಸಬೇಕು ಮತ್ತು ಸುರಕ್ಷತಾ ಅಶ್ರಯಗಳ (Bomb Shelter) ಹತ್ತಿರ ಇರುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ (https://www.oref.org.il/en) ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸಿ.ಅದ್ಯಾಗೂ ತುರ್ತು ಸಂದರ್ಭದಲ್ಲಿ ಕೆಳಗೆ ನೀಡಲಾಗಿರುವ ಸಹಾಯವಾಣಿ, ಇಮೇಲ್ ಮೂಲಕ ಸಂಪರ್ಕಿಸಬಹುದಾಗಿದೆ.

ತುರ್ತು ಸಂದರ್ಭದಲ್ಲಿ ಸಂಪರ್ಕಿಸಿ: +97235226748 ನಲ್ಲಿ ಸಂಪರ್ಕಿಸಿ ಅಥವಾ [email protected] ನಲ್ಲಿ e-ಮೇಲ್ ಸಂದೇಶವನ್ನು ಕಳುಹಿಸುವಂತೆ ತಿಳಿಸಲಾಗಿದೆ. ಕರ್ನಾಟಕದಿಂದ ಇಸ್ರೇಲ್‌ಗೆ ಬಂದಿರುವ ಕನ್ನಡಿಗರು ಅಥವಾ ಯಾವುದೇ ಭಾರತೀಯ ನಾಗರಿಕರಿಗೆ ಸಹಾಯದ ಅಗತ್ಯವಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ: 080222340676, 08022253707.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!