ನಾಲ್ಕು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಿರ್ವೈಜ್ ಉಮರ್ ಫಾರೂಕ್ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ನಾಲ್ಕು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್ (Hurriyat Conference) ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ (Mirwaiz Umar Farooq) ಬಿಡುಗಡೆಯಾಗಿದ್ದಾರೆ.

ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು (Article 370) ಕೇಂದ್ರಸರ್ಕಾರ ರದ್ದುಗೊಳಿಸುವ ಸಮಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿ ಇರಿಸಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳು ಗುರುವಾರ ಮಿರ್ವೈಜ್ ಅವರ ನಿವಾಸಕ್ಕೆ ಭೇಟಿ ನೀಡಿ ಬಿಡುಗಡೆ ಮಾಡುತ್ತಿರುವ ವಿಚಾರವನ್ನು ತಿಳಿಸಿದ್ದು, ಶುಕ್ರವಾರದ ಪ್ರಾರ್ಥನೆಗಾಗಿ ಶ್ರೀನಗರ ಜಾಮಿಯಾ ಮಸೀದಿಗೆ (Jamia Masjid) ಹೋಗಲು ಅವಕಾಶ ನೀಡಿದ್ದರು.

ವಿವಿಧ ಧಾರ್ಮಿಕ ಸಂಘಟನೆಗಳ ಮುಖ್ಯಸ್ಥರಾಗಿರುವ ಮತ್ತು ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷರಾಗಿರುವ ಮಿರ್ವೈಜ್ ಅವರು ತನ್ನ ಬಿಡುಗಡೆ ಕೋರಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನಾಲ್ಕು ವಾರಗಳಲ್ಲಿ ಉತ್ತರ ನೀಡುವಂತೆ ಸೆ.15 ರಂದು ಸೂಚಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!