Saturday, November 8, 2025

ರೈತರ ಸೋಗಿನಲ್ಲಿ ಬಂದಿದ್ದ ಕಿಡಿಗೇಡಿಗಳು: ಡಿವೈಎಸ್ಪಿ ಕೈ ಮುರಿತ, 4 ಸರ್ಕಾರಿ ಬಸ್​ ಗಾಜು ಪುಡಿ ಪುಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರತಿ ಕ್ವಿಂಟಲ್​​ ಕಬ್ಬಿಗೆ 3500 ರೂ. ನಿಗದಿ ಮಾಡುವಂತೆ ರೈತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಈ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ ಶಾಂತಿಯುತ ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಡಿವೈಎಸ್ಪಿ ಕೈ ಮುರಿದೆ. ಇನ್ನು ನಾಲ್ಕು ಕೆಎಸ್​ಆರ್​​ಟಿಸಿ ಬಸ್​​ಗಳ ಗ್ಲಾಸ್ ಪುಡಿ ಪುಡಿಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಬೆಳಗಾಗಿ ಎಸ್ಪಿ ಭೇಟಿ ನೀಡಿದ್ದಾರೆ.

ಹತ್ತರಗಿಯಲ್ಲಿ ಕಲ್ಲು ತೂರಾಟದಲ್ಲಿ 4 ಕೆಎಸ್​ಆರ್​​ಟಿ ಬಸ್ ಹಾಗೂ ಲಾರಿಗಳ ಗಾಜು ಪುಡಿ ಪುಡಿಯಾಗಿದೆ. ಬಸ್​ಗಳಿಗೆ ಹಾನಿಯಾಗಿರುವುದರಿಂದ ಸ್ಥಳಕ್ಕೆ ಕೆಎಸ್​​ಆರ್​ಟಿಸಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಇನ್ನು ಲಾರಿ ಸೇರಿದಂತೆ ಇತರೆ ವಾಹನಗಳಿಗೂ ಹಾನಿಯಾಗಿದೆ.

ನಾವು ಕಲ್ಲು ತೂರಾಟ ಮಾಡಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

error: Content is protected !!