ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಫಾಲ್ ಪೂರ್ವ ಜಿಲ್ಲೆಯ ಖಾಮೆಲಾಕ್ ಗ್ರಾಮದಲ್ಲಿ ಶಂಕಿತ ಉಗ್ರರು ನಡೆಸಿದ ದಾಳಿ ವೇಳೆ ಕನಿಷ್ಠ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶಸ್ತ್ರಸಜ್ಜಿತ ಉಗ್ರರು ಖಾಮೆಲಾಕ್ ಗ್ರಾಮದ ಮೇಲೆ ಮಂಗಳವಾರ ರಾತ್ರಿ ದಾಳಿ ಮಾಡಿದ್ದಾರೆ. ಈ ವೇಳೆ ಒಂಬತ್ತು ಗ್ರಾಮಸ್ಥರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂತ್ರಸ್ತರು ಆಗಷ್ಟೇ ಊಟ ಮುಗಿಸಿ ಮಲಗಿದ್ದರು ಎಂದು ತಿಳಿದುಬಂದಿದೆ. ದಾಳಿಯಿಂದ ಗಾಯಗೊಂಡಿದ್ದವರನ್ನು ತಕ್ಷಣವೇ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಹೇಳಿದ್ದಾರೆ.