ಹೊಸದಿಗಂತ ವರದಿ ಚಿತ್ರದುರ್ಗ:
ಅಪರಿಚಿತ ದುಷ್ಕರ್ಮಿಗಳು ಮಹಿಳೆಯನ್ನು ಜಮೀನಿನಲ್ಲಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಭಾಗ್ಯಮ್ಮ (46) ಎಂದು ಗುರುತಿಸಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಮಹಾದೇವನಕಟ್ಟೆ ಗ್ರಾಮದ ಬಳಿ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ವೀರಭದ್ರಪ್ಪ ಎಂಬುವರ ಜಮೀನಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಹಳೆಯ ದ್ವೇಷ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.