ಕೊಯಮತ್ತೂರಿನ ಬಿಜೆಪಿ ಕಚೇರಿ ಸಮೀಪ ಪೆಟ್ರೋಲ್ ಬಾಂಬ್ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ತಮಿಳುನಾಡಿನ ಕೊಯಮತ್ತೂರು ನಗರದ ಬಿಜೆಪಿ ಕಚೇರಿ ಬಳಿ ಗುರುವಾರ ರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದು, ಸ್ಥಳದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ.
ಘಟನೆಯಿಂದ ಯಾವುದೇ ಹಾನಿ ಅಥವಾ ಗಾಯಗಳು ವರದಿಯಾಗಿಲ್ಲ, ಈ ಭಾಗವೂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪಿಎಫ್‌ಐ ಕಚೇರಿಗಳು ಮತ್ತು ಅದರ ಪದಾಧಿಕಾರಿಗಳ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿದ ಕೆಲವೇ ಗಂಟೆಗಳ ಅಂತರದಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ ನಡೆದಿದೆ.
ಹಿರಿಯ ಅಧಿಕಾರಿಗಳ ತಂಡವು ಘಟನಾ ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಪೆಟ್ರೋಲ್ ಬಾಂಬ್ ಪಕ್ಷದ ಕಚೇರಿ ಕಟ್ಟಡದ ಕೆಳಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆಯುವ ಮೊದಲು ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಬಳಿ ಕೆಲವರು ಅನುಮಾನಾಸ್ಪದವಾಗಿ ಚಲಿಸುತ್ತಿರುವುದನ್ನು ಕೆಲವು ಸ್ಥಳೀಯರು ಗಮನಿಸಿದ್ದಾರೆ ಎಂದು ಅವರು ಹೇಳಿದರು.

ಆ ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಿಂದ ದೊರೆತ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ನಂತರ ಬಿಜೆಪಿಯ ಹಿರಿಯ ಮುಖಂಡರು ಸ್ಥಳಕ್ಕೆ ಆಗಮಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಈ ಘಟನೆಯಿಂದ ನಮ್ಮ ಸಹೋದರ ಸಹೋದರಿಯರನ್ನು ತಡೆಯಲು ಸಾಧ್ಯವಿಲ್ಲ. ಇದು ನಮ್ಮ ಸಮಾಜ ಮತ್ತು ದೇಶಕ್ಕೆ ದ್ರೋಹ ಬಗೆಯುವ ಶಕ್ತಿಗಳ ವಿರುದ್ಧ ಕಠಿಣವಾಗಿ ಹೋರಾಡುವ ನಮ್ಮ ಮನೋಭಾವವನ್ನು ಬಲಪಡಿಸುತ್ತದೆ ಎಂದು ಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಟ್ವಿಟ್‌ ಮೂಲಕ ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!