ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವಿಶೇಷ ರೈಲಿಗೆ ಕಲ್ಲು ಎಸೆದ ದುಷ್ಕರ್ಮಿಗಳು, ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಝಾನ್ಸಿಯಿಂದ ಪ್ರಯಾರಾಜ್ ಗೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಹರ್ಪಾಲ್ ಪುರ್ ನಿಲ್ದಾಣದಲ್ಲಿ ಕಲ್ಲು ತೂರಾಟ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುರುಷರು ರೈಲಿನ ಮೇಲೆ ಕಲ್ಲುಗಳನ್ನು ಎಸೆಯುವುದನ್ನು, ಕಿಟಕಿಗಳನ್ನು ಒಡೆಯುವುದನ್ನು ನೋಡಬಹುದಾಗಿದೆ.

ಈ ವಿಶಿಷ್ಟ ರೈಲು ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಷ್ಟ್ರದಾದ್ಯಂತದ ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಈ ರೈಲಿನ ಮೂಲಕ ಭಕ್ತರು ಪ್ರಯಾಗ್ ರಾಜ್ ಗೆ ಪ್ರಯಾಣ ಬೆಳೆಸುತ್ತಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!