ವಂದೇ ಭಾರತ್​ ಎಕ್ಸ್‌ಪ್ರೆಸ್ ರೈಲಿ​ಗೆ ಕಲ್ಲೆಸೆದ ದುಷ್ಕರ್ಮಿಗಳು: ಕಿಟಕಿ ಗಾಜುಗಳಿಗೆ ಹಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ದುಷ್ಕರ್ಮಿಗಳು ಕಲ್ಲು ತೂರಿರುವ ಮತ್ತೊಂದು ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಭಾನುವಾರ ನಡೆದಿದೆ.

ರೈಲು ಗೋರಖ್‌ಪುರದಿಂದ ಲಖನೌ ಕಡೆಗೆ ತೆರಳುತ್ತಿತ್ತು. ಈ ವೇಳೆ ಬಾರಾಬಂಕಿಯ ಸಫೇದಾಬಾದ್ ರೈಲು ನಿಲ್ದಾಣದ ಬಳಿ ರಾತ್ರಿ 10:40ಕ್ಕೆ ಈ ಅಹಿತಕರ ಘಟನೆ ನಡೆದಿದ್ದು, ಕೋಚ್‌ನ ಕಿಟಕಿಯ ಗಾಜುಗಳಿಗೆ ಹಾನಿಯಾಗಿದೆ.

ಈ ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಬೆಂಗಾವಲು ತಂಡ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಆರ್‌ಎಫ್‌ಪಿ ಇನ್ಸ್‌ಪೆಕ್ಟರ್‌ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!