ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಿದ ಘಟನೆಗಳು ವರದಿಯಾಗಿದ್ದು, ಇದೀಗ ಅಂತಹದ್ದೇ ಮತ್ತೊಂದು ಘಟನೆ ರಾಜ್ಯದಲ್ಲಿ ಮರುಕಳಿಸಿದೆ. ಕಲಬುರಗಿಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಸವ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಕಲಬುರಗಿ ತಾಲೂಕಿನ ಬಬಲಾದ ಗ್ರಾಮದ ಬಳಿ ತಡರಾತ್ರಿ ಬಸವ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಇದರಿಂದ ರೈಲಿನ AC A1 ಬೋಗಿಯ ಗಾಜು ಪುಡಿ-ಪುಡಿಯಾಗಿದ್ದು, ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅದಾಗ್ಯೂ ಕಿಡಿಗೇಡಿಗಳು ರೈಲಿನ ಇಂಜಿನ್ ಮೇಲೆ ಸಹ ಕಲ್ಲು ಎಸೆದಿದ್ದು, ಗಾಜು ಪುಡಿ ಪುಡಿಯಾಗಿದೆ. ಈ ಘಟನೆಯ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.