ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಂಟೆಕ್ಸ್ ಟ್ಯಾಂಕ್‌ಗೆ ಪೆಟ್ರೋಲ್ ತುಂಬಿಸಿ ಶೆಡ್ ಗೆ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಪರಿಣಾಮ ತಾಯಿ ಮತ್ತು ಮಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜೈಬಾನ್ (55), ಶಬಾನ್ (25) ಮೃತಪಟ್ಟವರು. ಬೆಂಕಿಯಿಂದ ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಶ್ವಾನದಳದ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಎಸ್.ಪಿ. ಅಮರನಾಥರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.