ವಿಗ್ರಹ ವಿರೂಪ: ತ್ರಿಪುರಾದಲ್ಲಿ 12 ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಶ್ಚಿಮ ತ್ರಿಪುರಾದ ರಾಣೀರ್‌ಬಜಾರ್ ಪ್ರದೇಶದ ದೇವಸ್ಥಾನವೊಂದರಲ್ಲಿ ವಿಗ್ರಹವನ್ನು ವಿರೂಪಗೊಳಿಸಿರುವ ವಿಚಾರ ತಿಳಿದ ನಂತರ ಅಪರಿಚಿತ ವ್ಯಕ್ತಿಗಳು ಕನಿಷ್ಠ 12 ಮನೆಗಳು ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜಿರಾನಿಯಾ ಉಪವಿಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಮತ್ತು ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

ಕೈತೂರ್ಬಾರಿಯಲ್ಲಿ ಕಾಳಿ ದೇವಿಯ ವಿಗ್ರಹವು ವಿರೂಪಗೊಂಡಿರುವುದು ಕಂಡುಬಂದ ನಂತರ ಭಾನುವಾರ ತಡರಾತ್ರಿ ರಾಣಿರ್‌ಬಜಾರ್‌ನಲ್ಲಿ ಸುಮಾರು 12 ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕೆಲವು ಮೋಟಾರ್‌ ಸೈಕಲ್‌ಗಳು ಮತ್ತು ಪಿಕ್-ಅಪ್ ವ್ಯಾನ್‌ಗಳು ಸಹ ಸುಟ್ಟು ಹಾಕಿದ್ದಾರೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ಅನಂತ ದಾಸ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here