ತಡರಾತ್ರಿ ತೆನಾಲಿಯಲ್ಲಿ ಅಣ್ಣಾ ಕ್ಯಾಂಟೀನ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:‌ 

ಗುಂಟೂರು ಜಿಲ್ಲೆಯ ತೆನಾಲಿಯಲ್ಲಿ ಅಣ್ಣಾ ಕ್ಯಾಂಟೀನ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕಟ್ಟಡದ ಮುಂಭಾಗದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮಿತ್ತು.  ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಟಿಡಿಪಿ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!