ಮಹಿಳೆ ಅಪಹರಣ ಯತ್ನ, ಓರ್ವ ಆರೋಪಿ ಸೆರೆ: ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿನ್ನೆ ಹರಿಯಾಣದ ಯಮುನಾ ನಗರದಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ.

ಜಿಮ್ ಹೋಗಿ ಬಂದ ಮಹಿಳೆ ತನ್ನ ಕಾರಿನಲ್ಲಿ ಕುಳಿತಿದ್ದ ವೇಳೆ 4 ಮಂದಿ ಅಪರಿಚಿತರು ಬಂದು ಆಕೆಯ ಕಾರಿಗೆ ನುಗ್ಗಿ ಆಕೆಯನ್ನು ಅಪಹರಿಸಲು ಯತ್ನಿಸಿದ್ದಾರೆ. ಈ ವೇಳೆ ಒಬ್ಬ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಉಳಿದವರಿಗಾಗಿ ಜಾಲ ಬೀಸಿರುವುದಾಗಿ ಯಮುನಾ ನಗರ ಡಿಎಸ್ಪಿ ಕಮಲದೀಪ್ ಸಿಂಗ್ ತಿಳಿಸಿದ್ದಾರೆ. ಈ ದೃಶ್ಯಗಳೆಲ್ಲವೂ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!