ಮೋಜು ಮಸ್ತಿಗಾಗಿ ಶಾಲೆಯನ್ನೂ ಬಿಡದ ದುಷ್ಕರ್ಮಿಗಳು

ಹೊಸದಿಗಂತ ವರದಿ ನಾಪೋಕ್ಲು :

ಶಾಲೆಯ ಬೀಗ ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೋಜು ಮಸ್ತಿ ಮಾಡಿ ಪರಾರಿಯಾಗಿರುವ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ.
ನಾಪೋಕ್ಲು ಹಳೇ ತಾಲುಕು ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಪ್ರಾಥಮಿಕ ಪಬ್ಲಿಕ್ ಶಾಲೆಯ ಕೊಠಡಿಯ ಬೀಗ ಒಡೆದು ಒಳನುಗ್ಗಿದ ಕಿಡಿಗೇಡಿಗಳು ಅನೈತಿಕ ಚಟುವಟಿಕೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ ಮಕ್ಕಳು ಶಾಲೆಗೆ ಬಂದಾಗ ಶಾಲೆಯ ಒಳಾಂಗಣದ ಕೊಠಡಿಯ ಬೀಗಲ ಒಡೆದಿರುವುದು ಗೋಚರಿಸಿದೆ. ಈ ಬಗ್ಗೆ ಮಕ್ಕಳು ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಶಿಕ್ಷಕರು ಪರಿಶೀಲಿಸಿದಾಗ ಶಾಲೆಯ ಮೇಲ್ಛಾವಣಿಯಲ್ಲಿ ಮಹಿಳೆ ಮತ್ತು ಗಂಡಸರ ಬಟ್ಟೆಗಳು ಹಾಗೂ ಸಿಗರೇಟ್ ತುಂಡುಗಳು ಪತ್ತೆಯಾಗಿದೆ.

ಘಟನೆ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸಂದರ್ಭ ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ, ಶಾಲೆಯ ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎನ್. ಎಸ್. ಶಿವಣ್ಣ, ಆಡಳಿತ ಮಂಡಳಿ ಸದಸ್ಯ ರಾಜೇಶ್, ಶಾಲೆಯ ಶಿಕ್ಷಕರು ಮತ್ತಿತರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!