ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಕನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಬೆಂಗಳೂರಿನ ಕೆಂಗೇರಿ ರಾಮಸಂದ್ರದ ಬಳಿ ತಾಹೀರ್ ಎಂಬ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬಂದಿದ್ದ ಯುವಕನನ್ನು ದುಷ್ಕರ್ಮಿಗಳು ಆಟೋದಲ್ಲಿ ಅಪಹರಿಸಿದ್ದಾರೆ. ಬಳಿಕ ಕೆಂಗೇರಿ ಬಳಿ ಕರೆದುಕೊಂಡು ಹೋಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಬೆಳಗ್ಗೆ ಸ್ಥಳೀಯರು ತಾಹೀರ್ ಶವವನ್ನು ಕಂಡು ಕೆಂಗೇರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.