Saturday, October 25, 2025

ನಡುರಸ್ತೆಯಲ್ಲಿ ದುಷ್ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕಾಮುಕರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆಯ ಆರ್‌ಎಂಸಿ ಠಾಣೆ ಪೊಲೀಸರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ವಿವರ:

ದಾವಣಗೆರೆ ಬಸ್‌ ನಿಲ್ದಾಣದಿಂದ ಬಾಲಕಿ ಮತ್ತು ಆಕೆಯ ಜೊತೆಗಿದ್ದ ಅಪ್ರಾಪ್ತ ಬಾಲಕ ಆಟೋದಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ, ಆಟೋ ಚಾಲಕ ಮತ್ತು ಆತನ ಸಹಚರ ಬಾಲಕಿ ಹಾಗೂ ಬಾಲಕನನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಬಾಲಕನ ಮೇಲೆ ಹಲ್ಲೆ ನಡೆಸಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಎರಡು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ದೌರ್ಜನ್ಯವೆಸಗಿದ ಬಳಿಕ ಆರೋಪಿಗಳು ಬಾಲಕಿಯ ಬಳಿಯಿದ್ದ ಮೊಬೈಲ್ ಮತ್ತು ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದರು.

ಘಟನೆ ಸಂಬಂಧ ಬಾಲಕಿ ಆರ್‌ಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ದೂರು ನೀಡುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರೂ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.

error: Content is protected !!