ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ತಪ್ಪು ಮಾಹಿತಿ: 10 ಯೂಟ್ಯೂಬ್ ಚಾನೆಲ್‌ಗಳ 45 ವೀಡಿಯೊ ಬ್ಯಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದ ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ಕೇಂದ್ರ ಸರ್ಕಾರವು ಯೂಟ್ಯೂಬ್ ಚಾನೆಲ್ ಗಳಿಂದ ಕೆಲವು ವೀಡಿಯೊಗಳನ್ನು ನಿರ್ಬಂಧಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಬಾರಿ 10 ಯೂಟ್ಯೂಬ್ ಚಾನೆಲ್ ಗಳಿಂದ 45 ಯೂಟ್ಯೂಬ್ ವೀಡಿಯೊಗಳನ್ನು ನಿರ್ಬಂಧಿಸಿದೆ ಎಂದು ತಿಳಿದು ಬಂದಿದೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು 2021 ರ ನಿಬಂಧನೆಗಳ ಅಡಿಯಲ್ಲಿ ಸಂಬಂಧಿತ ವೀಡಿಯೊಗಳನ್ನು ನಿರ್ಬಂಧಿಸಲು 23.09.2022 ರಂದು ಆದೇಶಗಳನ್ನು ಹೊರಡಿಸಲಾಗಿದೆ. ಬ್ಲಾಕ್ ಮಾಡಲಾದ ವೀಡಿಯೊಗಳು 1 ಕೋಟಿ 30 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!